ಬಿಜೆಪಿ ಪಕ್ಷದ ಟಿಕೆಟ್ ಹಂಚಿಕೆ ಬಗ್ಗೆ ಮುಖಂಡರು ಬಹಿರಂಗವಾಗಿ ಹೇಳಿಕೆ ನೀಡುವುದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ಸಂಪೂರ್ಣವಾಗಿ ಹೈಕಮಾಂಡ್ ನಿರ್ವಹಿಸುತ್ತದೆ. ಇದರಲ್ಲಿ ರಾಜ್ಯ ನಾಯಕರ ಹಸ್ತಕ್ಷೇಪವಿಲ್ಲ ಎಂದು ತಿಳಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗಾಗಿ ಸಿದ್ದತೆ ಆರಂಭಿಸಿ. ಬೂತ್ ಮಟ್ಟದ ಸಮಿತಿಗಳನ್ನು ರಚಿಸಬೇಕು. ಪಕ್ಷ ಸಂಘಟನೆಗಾಗಿ ಹಗಲಿರಳು ಶ್ರಮಿಸಿ