ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ ರಾತ್ರಿ ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಒಟ್ಟು 189 ಅಭ್ಯರ್ಥಿಗಳ ಪೈಕಿ 8 ಮಹಿಳೆಯರಿಗೆ ಟಿಕೆಟ್ ಘೋಷಿಸಿದೆ. ಘೋಷಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂವರು ಹಾಲಿ ಶಾಸಕಿಯರು ಬಿಜೆಪಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಶಿಕಲಾ ಜೊಲ್ಲೆ, ಪೂರ್ಣಿಮಾ ಶ್ರೀನಿವಾಸ್ ಹಾಗೂ ರೂಪಾಲಿ ಸಂತೋಷ್ ನಾಯ್ಕ್ ಹಾಲಿ ಶಾಸಕರು.ಈ ಬಾರಿ ಚುನಾವಣೆಯಲ್ಲಿ 52 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ.