ಕೊರೊನಾ ಪಿಡುಗನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಸಾರಿಗೆ ಸಂಸ್ಥೆಗಳ ಬಸ್ಸುಗಳ ಮತ್ತು ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಖಾಸಗಿ ವಾಹನಗಳು ದುಪ್ಪಟ್ಟು ಟಿಕೆಟ್ ದರ ವಿಧಿಸುತ್ತಿವೆ.ಕೊರೊನಾ ವೈರಸ್ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ಸುಲಿಗೆ ಮಾಡಿ ಕೆಲವೆಡೆ ಖಾಸಗಿ ವಾಹನಗಳು, ಖಾಸಗಿ ಬಸ್ಸುಗಳ ಮತ್ತು ಆಟೋರಿಕ್ಷಾಗಳ ಮಾಲೀಕರು ಪ್ರಯಾಣಿಕರನ್ನು ಶೋಷಿಸುತ್ತಿದ್ದಾರೆ. ರಾಜ್ಯದ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳು ಕಂಡು ಬರುತ್ತಿದ್ದು, ಅಂಥವರ ಮೇಲೆ ಕಠಿಣ