ಟಿಪ್ಪು ಸುಲ್ತಾನ್ ನಾಡದ್ರೋಹಿ, ಅತ್ಯಾಚಾರಿ, ಕೊಲೆಗಡುಕ ಎಂದು ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಮತ್ತು ಮಾಜಿ ಸಚಿವ ಸಿ.ಟಿ.ರವಿ ವಿರುದ್ಧ ದೂರು ದಾಖಲಾಗಿದೆ. ಕೇಂದ್ರ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಅನಂತಕುಮಾರ್ ಹೆಗಡೆ ಮತ್ತು ಶಾಸಕ ಸಿ.ಟಿ.ರವಿ ವಿರುದ್ಧ ಆಲಂ ಪಾಶಾ ಎನ್ನುವವರು ದೂರು ದಾಖಲಿಸಿದ್ದಾರೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ 10ನೇ ಎಸಿಎಂಎಂ ಕೋರ್ಟ್ನಲ್ಲಿ ಪೊಲೀಸರಿಗೆ ಎಫ್ಐಆರ್ ದಾಖಲಿಸಲು ನಿರ್ದೇಶನ ಕೋರಿ ದೂರು