ಬಿಜೆಪಿಯ ವಿರೋಧದ ನಡುವೆಯೂ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿಯನ್ನ ಗಡಿ ಜಿಲ್ಲೆಯಲ್ಲಿ ಆಚರಣೆ ಮಾಡಲು ಪೂರ್ವ ಸಿದ್ಧತೆ ಸಭೆ ನಡೆಸಲಾಗಿದೆ.ಚಾಮರಾಜನಗರದಲ್ಲಿ ಟಿಪ್ಪು ಜಯಂತಿ ಆಚರಿಸಲು ಸ್ಥಳೀಯ ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ. ಈ ಸಂಬಂಧ ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಬಿ. ಬಿ. ಕಾವೇರಿ ಅಧ್ಯಕ್ಷತೆಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮ ಕುರಿತಾದ ಪೂರ್ವಭಾವಿ ಸಭೆ ನಡೆಸಲಾಯಿತು.ನವೆಂಬರ್ 10 ರಂದು ಚಾಮರಾಜನಗರದ ಅಂಬೇಡ್ಕರ್ ಭವನದಲ್ಲಿ ಸರ್ಕಾರಿ ನಿರ್ದೇಶನದಂತೆ ಟಿಪ್ಪು