ದೇವಾಲಯಗಳ ಆವರಣ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇಗುಲಗಳ ಸುತ್ತಮುತ್ತ ಬೀಡಿ, ಸಿಗರೇಟ್, ಪಾನ್ ಮಸಾಲ, ಗುಟ್ಖಾ ದಂತಹ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂಬ ಆದೇಶ ಶೀಘ್ರದಲ್ಲೇ ಹೊರಬೀಳಲಿದೆ. ಈ ನಿಯಮ ಇಲಾಖೆ ವ್ಯಾಪ್ತಿಯ ಎಲ್ಲಾ 33 ಸಾವಿರ ದೇವಾಲಯಗಳಿಗೂ ಅನ್ವಯ ಆಗಲಿದೆ. ದೇವಾಲಯದ ಹೊರಭಾಗದಲ್ಲಿ ತಂಬಾಕು ಉತ್ಪನ್ನಗಳ