ಬೆಂಗಳೂರು : ಶುಕ್ರವಾರ (ಇಂದು )ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನೇತೃತ್ವ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡಲಿದ್ದು, ಹಲವು ಜನಪ್ರಿಯ ಯೋಜನೆಗಳು ಬಜೆಟ್ ನಲ್ಲಿ ಘೋಷಣೆಯಾಗುವ ಸಾಧ್ಯತೆಯಿದೆ . ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಸಹಕಾರಿ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡುತ್ತಾರೆಂಬ ಬಹು ನಿರೀಕ್ಷೆಯಿದೆ. ಅಲ್ಲದೆ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಮತಗಳ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯನವರು ಈ ವರ್ಗಕ್ಕೆ ವಿಶೇಷ ಆದ್ಯತೆ ನೀಡಬಹುದೆಂದು ಹೇಳಲಾಗುತ್ತಿದೆ.