ನಿನ್ನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಾಪಾಲಾನಾಯಕ್ ತಾಂಡಾದಿಂದ ಅಪಹರಣವಾಗಿದ್ದ ಮೂರು ವರ್ಷದ ಪುಟ್ಟ ಮಗು ಇಂದು ಗ್ರಾಮದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದೆ. ಹೌದು, ನಿನ್ನೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಬಾಲಕ ಸಾಗರ್ ಜಾದವ್(3) ಕಣ್ಮರೆಯಾಗಿದ್ದ. ಇದರಿಂದ ಕಂಗಾಲಾಗಿದ್ದ ಬಾಲಕನ ಪೋಷಕರು ಮಗುವನ್ನು ಹುಡುಕುವ ಪ್ರಯತ್ನದಲ್ಲಿದ್ದರು. ಈ ವೇಳೆ ಗ್ರಾಮದ ಹೊರ ವಲಯದಲ್ಲಿ ಮಗುವಿನ ಮೃತ ದೇಹ ಪತ್ತೆಯಾಗಿದೆ. ಈ ಸಂಬಂಧ ಕೊಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,