ನವದೆಹಲಿ: ಉಪಚುನಾವಣೆಯ ಭರ್ಜರಿ ಗೆಲುವಿನೊಂದಿಗೆ ಪಕ್ಷದ ಹೈಕಮಾಂಡ್ ಮುಖಂಡರನ್ನು ಭೇಟಿ ಮಾಡಲು ಆಗಮಿಸಿರುವ ಸಿಎಂ ಸಿದ್ದರಾಮಯ್ಯ, ಇಂದು ರಾಜ್ಯದ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.