ಚೈತ್ರ ಪೌರ್ಣಮಿಯ ಬೆಳದಿಂಗಳಲ್ಲಿ ಐತಿಹಾತಿಕ ಬೆಂಗಳೂರು ಕರಗ ಶಕ್ತ್ಯೋತ್ಸವವು ಗುರುವಾರ ಮಧ್ಯರಾತ್ರಿ ವಿಜೃಂಭಣೆಯಿಂದ ಜರುಗಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಹಿಂದೂ ಪಂಚಾಂಗದ ಪ್ರಕಾರ ಚೈತ್ರ ಪೌರ್ಣಮಿಯ ಗುರುವಾರ ಮಧ್ಯರಾತ್ರಿ ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಲಿದೆ. ಮಧ್ಯರಾತ್ರಿ 12.30ಕ್ಕೆ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಹೊರಡುವ ಹೂವಿನ ಕರಗವನ್ನು ಈ ಬಾರಿಯೂ ತಿಗಳ ಸಮುದಾಯದ ಅರ್ಚಕ ವಿ.ಜ್ಞಾನೇಂದ್ರ ಹೊರಲಿದ್ದಾರೆ. ಕರಗ ಹೊರಲಿರುವ ಜ್ಞಾನೇಂದ್ರ ಅವರು ಬೆಳಗ್ಗೆ 10.30ಕ್ಕೆ ದೇವಾಲಯದಲ್ಲಿ ವಿಶೇಷ