ಬೆಂಗಳೂರು : ಸಿದ್ದಗಂಗಾಶ್ರೀಗಳು ಶಿವೈಕ್ಯರಾಗಿ ಇಂದಿಗೆ 11 ದಿನವಾದ ಹಿನ್ನಲೆಯಲ್ಲಿ ಮಠದಲ್ಲಿ ಇಂದು ಶ್ರೀಗಳ ಪುಣ್ಯಾರಾಧನೆ ಕಾರ್ಯಕ್ರಮ ನಡೆಯುತ್ತಿದೆ. ನಾಡಿನ ಮೂಲೆ ಮೂಲೆಯಿಂದ ಲಕ್ಷಾಂತರ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಮಠದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇಂದು ಸಿದ್ಧಗಂಗೆಯಲ್ಲಿ ಬೆಳಗ್ಗೆ 5ರಿಂದ ಶ್ರೀಗಳ ಗದ್ದುಗೆ ಪೂಜೆ ಆರಂಭವಾಗಿದ್ದು, ಸಿದ್ಧಲಿಂಗ ಶ್ರೀಗಳು ಸೇರಿ ವಿವಿಧ ಮಠಾಧೀಶರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಸಿದ್ಧಲಿಂಗ ಶ್ರೀಗಳ ನೇತೃತ್ವದಲ್ಲಿ ಬೆಳಿಗ್ಗೆ8.30ಕ್ಕೆ ಬೆಳ್ಳಿರಥದಲ್ಲಿ ಸ್ವಾಮೀಜಿಯ