ಇಂದು ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನಲೆ; ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12ರಿಂದ ನಿಷೇಧಾಜ್ಞೆ ಜಾರಿ

ಬೆಂಗಳೂರು| pavithra| Last Modified ಗುರುವಾರ, 31 ಡಿಸೆಂಬರ್ 2020 (12:31 IST)
ಬೆಂಗಳೂರು : ಇಂದು ಹೊಸ ವರ್ಷದ ಸಂಭ್ರಮಾಚರಣೆಯ  ಹಿನ್ನಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಮಧ್ಯಾಹ್ನ 12 ಗಂಟೆಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಕೊರೊನಾ ಹರಡುವ ಭೀತಿಯಿಂದ ಹೊಸ ವರ್ಷದ ಸಂಭ್ರಾಮಾಚರಣೆಗೆ ಬ್ರೇಕ್ ಹಾಕಲು ಇಂದು ಮಧ್ಯಾಹ್ನ 12 ಗಂಟೆಯಿಂದ  ನಾಳೆ ಬೆಳಿಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಸಿಲಾಗಿದೆ.

ಇಂದು ಪೊಲೀಸರು ಪ್ರತಿವಾಹನದ ಮೇಲೆ ಹದ್ದಿನ ಕಣ್ಣು ಇಡಲಿದ್ದಾರೆ. ಪಬ್ ಬಾರ್ ರೆಸ್ಟೋರೆಂಟ್ ಗಳಿಗೆ ಪಾರ್ಟಿ ಮಾಡದಂತೆ ನೋಟಿಸ್ ನೀಡಲಾಗಿದೆ. ಗುಂಪು ಕಟ್ಟಿಕೊಂಡು ಓಡಾಡಿದರೆ ಕೇಸ್ ಹಾಕಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :