ಬಾಗಲಕೋಟೆ : ಜಮಖಂಡಿ ಹೊಸ ಜಿಲ್ಲೆಯಾಗಬೇಕೆಂದು ಆಗ್ರಹಿಸಿ ಇಂದು ಜಮಖಂಡಿ ನಗರ ಬಂದ್ ಗೆ ಕರೆ ನೀಡಲಾಗಿದೆ. ಜಮಖಂಡಿ ಜಿಲ್ಲಾ ಸಂಕಲ್ಪ ಹೋರಾಟ ಸಮಿತಿಯಿಂದ ಬಂದ್ ಗೆ ಕರೆ ನೀಡಿದ್ದು, ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು ಹಾಗೂ ಬಸ್ ಸಂಚಾರ ಸೇರಿದಂತೆ ಎಲ್ಲ ಸಾರಿಗೆ ವ್ಯವಸ್ಥೆ ಇಂದು ಬಂದ್ ಆಗಿವೆ. ಜಮಖಂಡಿ ಓಲೆ ಮಠದ ಚನ್ನಬಸವ ಸ್ವಾಮೀಜಿ ಇಂದು ಜಮಖಂಡಿ ಬಂದ್ ಹೋರಾಟದ ನೇತೃತ್ವ ವಹಿಸಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲಾ ಸಂಕಲ್ಪ