ಹುಬ್ಬಳ್ಳಿ : ಹೃದಯಾಘಾತದಿಂದ ನಿನ್ನೆ ನಿಧನರಾದ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅಂತ್ಯಕ್ರಿಯೆ ಇಂದು ಸಂಜೆ ನಡೆಯಲಿದೆ. ಶುಕ್ರವಾರ ರಾತ್ರಿ ಧಾರವಾಡದ ಕುಂದಗೋಳಕ್ಕೆ ಪಾರ್ಥಿವ ಶರೀರ ರವಾನಿಸಲಾಯ್ತು. ಬಳಿಕ ಶಿವಾನಂದ ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾವಿರಾರು ಜನರು ಆಗಮಿಸಿ ತಮ್ಮ ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ನಂತರ ಯರಗುಪ್ಪಿಗೆ ಕೊಂಡೊಯ್ದು ಅಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ಮಧ್ಯಾಹ್ನ ಮೂರೂವರೆಗೆ ಸಿಎಂ ಕುಮಾರಸ್ವಾಮಿ ಆಗಮಿಸಲಿದ್ದಾರೆ.