ಸರ್ಕಾರಿ ಕಾರ್ಯ ನಿಮಿತ್ತ ನಿನ್ನೆ ರಾಷ್ಟ್ರ ರಾಜಧಾನಿ ನವದೆಹಲಿಗೆ ತಲುಪಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11.30ರ ಸುಮಾರಿಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರ್ ರಚನೆ ಸಂಬಂಧ ಚರ್ಚಿಸಲಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ. ಹೌದು, ಸ್ವಚ್ಛತಾ ಅಭಿಯಾನದ ಸಲುವಾಗಿ ಕೇಂದ್ರ ಸರ್ಕಾರ ಆಯೋಜಿಸಿದ್ದ ಮುಖ್ಯಮಂತ್ರಿಗಳ ಸಭೆಗೆಂದು ನಿನ್ನೆ ನವದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ