ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದು ಕಾಂಗ್ರೆಸ್ ಪಕ್ಷದಿಂದ ಹೊರ ಬಂದಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸಮ್ಮುಖದಲ್ಲಿ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಪಕ್ಷ ಸೇರ್ಪಡೆಯಾದರು. ತಮ್ಮನ್ನು ಸಚಿವ ಸಂಪುಟದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್