ಬೆಂಗಳೂರು : ಇಂದು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಮಧ್ಯಾಹ್ನ 12.30ಕ್ಕೆ ಹಣಕಾಸು ಸಚಿವರಾಗಿರುವ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರದ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ರೈತರಿಗೆ ವಿಶೇಷ ಕೊಡುಗೆಯನ್ನು ನಿರೀಕ್ಷೆಯಿದ್ದು, ರೈತರ ಬೆಳೆ ಸಾಲ ಮನ್ನಾ ಯೋಜನೆಗೆ ಹೆಚ್ಚಿನ ಹಣ ನಿಗದಿಪಡಿಸುವುದು, ರಾಷ್ಟ್ರೀಕೃತ ಬ್ಯಾಂಕ್ ನಲ್ಲಿರುವ ರೈತರ ಸಾಲ ಮನ್ನಾದ ಕುರಿತು ಪ್ರಕಟಿಸಲಿದ್ದಾರೆ. ಕೃಷಿಗೆ ಆದ್ಯತೆ ನೀಡಲಾಗುತ್ತದೆ. ಜೊತೆಗೆ ಕಡು ಬಡವರಿಗೆ