ಬೆಂಗಳೂರು-ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಮೊದಲ ಟೋಲ್ ಆರಂಭವಾಗಿದ್ದು,ಬೆಂಗಳೂರು-ನಿಡಘಟ್ಟ ನಡುವಿನ ಶೇಷಗಿರಿಹಳ್ಳಿಯ ಟೋಲ್ ಕಾರ್ಯಾಚರಣೆ ಮಂಗಳವಾರದಿಂದ ಶುರುವಾಗಲಿದೆ.ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ ರಸ್ತೆಗೆ ಶುಲ್ಕ ವಸೂಲಿ ಕುರಿತು ಕೇಂದ್ರ ಹೆದ್ದಾರಿ ಪ್ರಾಧಿಕಾರದಿಂದ ಪ್ರಕಟಣೆ ಹೊರಡಿಸಿದೆ.ವಿವಿಧ ಮಾದರಿಯ ವಾಹನಗಳಿಗೆ ಪ್ರತ್ಯೇಕ ದರ ನಿಗದಿಯಾಗಿದೆ. ಹೆದ್ದಾರಿ ಪ್ರಾಧಿಕಾರ ಸರ್ವೀಸ್ ರಸ್ತೆ ಹೊರತುಪಡಿಸಿ, ಉಳಿದ ಆರು ಪಥಗಳಿಗೆ ಶುಲ್ಕ ನಿಗದಿ ಮಾಡಿದೆ.