ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆಯನ್ನು ಜಾರಿಗೊಳಿಸುವುದು ಸೇರಿ 12 ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ನಾಳೆಯಿಂದ ಎರಡು ದಿನಗಳ ಕಾಲ ಕರೆ ನೀಡಿರುವ ಮುಷ್ಕರದಿಂದ ರಾಷ್ಟ್ರಾದ್ಯಂತ ಜನಜೀವನ ಅಸ್ತವ್ಯಸ್ಥಗೊಳ್ಳುವ ಸಾಧ್ಯತೆಯಿದೆ.ಎಐಟಿಯುಸಿ, ಸಿಐಟಿಯು, ಐಎನ್ಟಿಯುಸಿ ಎಲ್ಫಿಎಫ್ ಸೇರಿದಂತೆ ಬಹುತೇಕ ಕಾರ್ಮಿಕ ಸಂಘಟನೆಗಳು, ರೈತ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಿ ಪಾಲ್ಗೊಳ್ಳುವುದರಿಂದ ಸರ್ಕಾರಿ ಸಾರಿಗೆ ಬಸ್ಗಳು, ಟ್ಯಾಕ್ಸಿ, ಆಟೋ,ಕ್ಯಾಬ್ಗಳ ಸಂಚಾರ ಬಹುತೇಕ ವಾಹನಗಳ ಸ್ಥಗಿತಗೊಳ್ಳಲಿದ್ದು ಸಾರ್ವಜನಿಕರು ಪರದಾಟುವ ಸ್ಥಿತಿ