ಕಳಸಾ-ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ನಾಳೆ ನಡೆಸಲಾಗುತ್ತಿರುವ ಕರ್ನಾಟಕ ಬಂದ್ಗೆ 1300ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ ಎಂಬುದಾಗಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಇಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆ ರಾಜ್ಯ ಬಂದ್ಗೆ ಕರೆ ನೀಡಲಾಗಿದ್ದು, ಬಂದ್ಗೆ ಪ್ರಮುಖವಾಗಿ ರಾಜಕೀಯ ಪಕ್ಷಗಳಾದ ಜೆಡಿಎಸ್ ಮತ್ತು ಸಿಪಿಐಎಂ ಪಕ್ಷಗಳು ಬೆಂಬಲ ಸೂಚಿಸಿವೆ. ಇದಲ್ಲದೆ ರಾಜಕೀಯೇತರ ಸಂಘಟನೆಗಳಾದ ಸ್ಯಾಂಡಲ್ವುಡ್ ಚಿತ್ರೋದ್ಯಮ, ರಾಜ್ಯ ಕಾರ್ಮಿಕ ಸಂಘಟನೆ, ಕನ್ನಡಪರ