ನಾಳೆ ಮತ್ತು ನಾಡಿದ್ದು ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದ್ದು ಸಭೆಯಲ್ಲಿ ಪಕ್ಷದ ಸಂಘಟನೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ದೇವೇಗೌಡರು ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಪಕ್ಷದ ನಾಯಕರಿಗೆ ಮಾರ್ಗದರ್ಶನ ಮಾಡಲಿದ್ದಾರೆ. ರಾಜ್ಯದಾದ್ಯಂತ ಪ್ರವಾಸ ಮಾಡುವ ಬಗ್ಗೆ ಕೂಡಾ ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದರು. ವಿಜಯಪುರದಲ್ಲಿ ಹಿಂದೆಂದು ಆಗದಂತಹ ರೈತರ ಸಮಾವೇಶ ಮಾಡಲು