ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಸೋಮವಾರ ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯುಧಪೂಜೆ ನೆರವೇರಿಸಿದರು. ಯದುವೀರ ಅವರು ಶುಭ್ರವಸ್ತ್ರಧಾರಿಯಾಗಿ ಅರಮನೆಯಲ್ಲಿನ ಆಯುಧಗಳಿಗೆ ಪೂಜೆ ನೆರವೇರಿಸಿ, ಖಾಸಗಿ ದರ್ಬಾರ್ ನಡೆಸಿದರು.ಪಟ್ಟದ ಆನೆ, ಕುದುರೆ, ಹಾಗೂ ವಾಹನಗಳಿಗೆ ಅವರು ಪೂಜೆ ಸಲ್ಲಿಸಿದರು. ಈ ಮಧ್ಯೆ, ಮಂಗಳವಾರ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ನಡೆಯಲಿದ್ದು, ಇದರೊಂದಿಗೆ ಕಳೆದ ಹತ್ತು ದಿನಗಳಿಂದ ಸಾಂಪ್ರದಾಯಿಕವಾಗಿ ನಡೆಯುತ್ತಿರುವ ನಾಡಹಬ್ಬಕ್ಕೆ ತೆರೆ