ರಾಜ್ಯದ ನಾಲ್ಕು ದಿಕ್ಕಿನಲ್ಲೂ ಕಮಲವನ್ನು ಅರಳಿಸಲು ಬಿಜೆಪಿ ಟೊಂಕ ಕಟ್ಟಿ ನಿಂತಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಮಾಡುತ್ತಿದ್ದು, ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ಕೋಟೆನಾಡು ಚಿತ್ರದುರ್ಗಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ನಗರದ ಜಯದೇವ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.