ಮಂಗಳೂರು ಚಲೋ ಕುರಿತಂತೆ ನಾಳೆ ಕೂಡಾ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾಳೆ ಕೂಡಾ ಪ್ರತಿಭಟನೆ ನಡೆಸುತ್ತೇವೆ. ಒಂದು ವೇಳೆ, ಸರಕಾರ ಪ್ರತಿಭಟನೆ ತಡೆಯಲು ಮುಂದಾದಲ್ಲಿ ನ್ಯಾಯಾಲಯದ ಮೊರೆಹೋಗುತ್ತೇವೆ. ಸರಕಾರದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಎಚ್ಚರಿಸಿದ್ದಾರೆ. ಡಿವೈಎಸ್ಪಿ ಎಂ.ಕೆ. ಗಣಪತಿ ಪ್ರಕರಣದಲ್ಲಿ ಅವರ ತಂದೆ ಕುಶಾಲಪ್ಪ ಅವರಿಗೆ ಸುಪ್ರೀಂಕೋರ್ಟ್ ನ್ಯಾಯ ನೀಡಿದೆ. ಗಣಪತಿ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಸಚಿವ