ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಾಳೆ ಸಂಜೆ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಿದ ನಂತರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ಎಸ್.ಎಂ.ಕೃಷ್ಣ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಎಸ್.ಎಂ. ಕೃಷ್ಣ ನಾಳೆ ಸಂಜೆ 6 ಗಂಟೆಗೆ ಬಿಜೆಪಿ ಸೇರ್ಪಡೆಯಾಗುವ ಮಾಹಿತಿ ಪಡೆದ ಯಡಿಯೂರಪ್ಪ, ಅವರಿಗೆ ದೂರವಾಣಿ ಕರೆ ಮಾಡಿ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಕ್ಕೆ ಅಭಿನಂದನೆಗಳು ತಿಳಿಸಿದ್ದಾರೆ.