ಬೆಂಗಳೂರು : ನಾಳೆ ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ನಡೆಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆ-ಟಿಇಟಿ) ನಡೆಯಲಿದೆ. ವೀಕೆಂಡ್ ಕರ್ಪ್ಯೂ ಇರುವ ಜಿಲ್ಲೆಗಳು ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲೂ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ತಿಳಿಸಿದೆ. ಬೆಳಿಗ್ಗೆ 9.30ರಿಂದ 12ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ 4ರವರೆಗೆ ಕ್ರಮವಾಗಿ ಪತ್ರಿಕೆ-1 ಹಾಗೂ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ. ಮೊದಲ ಪತ್ರಿಕೆಗೆ 1,03,267 ಅಭ್ಯರ್ಥಿಗಳು,