ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ರಂಗೇರಿದ ಚುನಾವಣಾ ರಾಜಕಾರಣ. ಅಭ್ಯರ್ಥಿಗಳ ಬೆಂಬಲಿಗರಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಪೋಸ್ಟ್ಸ್ ವೈರಲ್ ಆಗಿವೆ. ಅಭ್ಯರ್ಥಿಗಳು ಚುನಾವಣೆಗೆ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಅಫಿಡವಿಟ್ ಸಲ್ಲಿಕೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಮನೆ ವಿಳಾಸದ ವಿಚಾರವಾಗಿ ಫೇಸ್ ಬುಕ್, ವಾಟ್ಸ್ ಆಪ್ ನಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್ ಅಭ್ಯರ್ಥಿ ಹೆಚ್.ಎಂ.ರೇವಣ್ಣ ಮನೆ ವಿಳಾಸದ ಬಗ್ಗೆ ಭಾರಿ ಚರ್ಚೆ