ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ಭಾನುವಾರ ಸಂಜೆ 5ಕ್ಕೆ ಹಮ್ಮಿಕೊಂಡಿದ್ದ ಟ್ವಿಟ್ಟರ್ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು,ದೇಶದಲ್ಲಿ 35 ಟಾಪ್ ಹ್ಯಾಷ್ಟ್ಯಾಗ್ನಡಿ ಟ್ವಿಟ್ಟರ್ ಟ್ರೆಂಡಿಂಗ್ ಆಗಿದೆ. ದಶಕಗಳಿಂದ ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯ ಕೇಳಿಬರುತ್ತಿದೆ.ಮಲೆನಾಡಿನ ತಾಲೂಕುಗಳ ಜನತೆ ತುರ್ತು ಅಥವಾ ಯಾವುದೇ ಚಿಕಿತ್ಸೆಗಾಗಿ ಹುಬ್ಬಳ್ಳಿ, ಬೆಳಗಾವಿ, ಕರಾವಳಿಯ ನಾಲ್ಕೂ ತಾಲೂಕಿನವರು ಉಡುಪಿ, ಮಂಗಳೂರು, ಕಾರವಾರದವರು ಗೋವಾ ರಾಜ್ಯದ ಆಸ್ಪತ್ರೆಗಳನ್ನು ಅವಲಂಬಿಸಿದ್ದಾರೆ.ಅತಿಹೆಚ್ಚು ರಸ್ತೆ