ಮಾಜಿ ಸಚಿವ ಡಿಕೆ ಶಿವಕುಮಾರ್ ರನ್ನು ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಪಂಜಿನ ಮೆರವಣಿಗೆ ನಡೆಸಲಾಗಿದೆ.ಬೆಂಗಳೂರು ಹೊರವಲಯ ಜಿಗಣಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ಜಿಗಣಿಯ ಡಬಲ್ ರೋಡ್ ರಸ್ತೆಯಿಂದ ಎಪಿಸಿ ಸರ್ಕಲ್ ವರೆಗೆ ನೂರಾರು ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ಪಂಜಿನ ಮೆರೆವಣಿಗೆ ಮಾಡಿದ್ರು.ಆ ಮೂಲಕ ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿ, ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.