ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಲ್ಲಿ ಅಧಿಕಾರದ ಮದದಿಂದ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅಸ್ತಿತ್ವಕ್ಕೆ ತಂದ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರದಲ್ಲಿರುವವರಿಗೆ ಕ್ಲೀನ್ ಚಿಟ್ ನೀಡುತ್ತಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬರಲಿ. ಕ್ಲೀನ್ ಚಿಟ್ ಪಡೆದ ಪ್ರಕರಣಗಳ ಮರುತನಿಖೆಗೆ ಆದೇಶಿಸಿ ಭ್ರಷ್ಟರನ್ನು ಕೃಷ್ಣನ ಜನ್ಮಸ್ಥಾನಕ್ಕೆ ಅಟ್ಟುತ್ತೇನೆ ಎಂದು ಅಬ್ಬರಿಸಿದ್ದಾರೆ ಲೋಕಾಯುಕ್ತ ಸಂಸ್ಥೆಯ ಹಾಳುಗೆಡುವಿ ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪಿಸಿ