ರಾಜ್ಯದಲ್ಲಿ ದಿನೇ ದಿನೇ ಕೊರೊನಾ ವೈರಸ್ ಕೇಸ್ ಗಳು ಹೆಚ್ಚಾಗುತ್ತಿರುವುದರಿಂದ ಸರಕಾರ ದಿಟ್ಟ ಹೆಜ್ಜೆ ಇಡಲು ಮುಂದಾಗುತ್ತಿದೆಯಾ ಅನ್ನೋ ಅನುಮಾನ ಮೂಡುತ್ತಿದೆ. ಯಾವುದಕ್ಕೂ ಉತ್ತರ ಸಿಗಬೇಕಾದರೆ ಜುಲೈ 7 ರವರೆಗೆ ಕಾಯಿರಿ. ಹೀಗಂತ ಸಚಿವ ಆರ್. ಅಶೋಕ್ ಹೇಳಿಕೆ ನೀಡಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ನಂತರ ಬೆಂಗಳೂರಿನಲ್ಲಿ ಮಾತ್ರ ಕಠಿಣ ಲಾಕ್ ಡೌನ್ ಜಾರಿಯಾಗುತ್ತಾ? ಅಥವಾ ರಾಜ್ಯದೆಲ್ಲೆಡೆ ಲಾಕ್ ಡೌನ್ ಬಿಗಿಗೊಳ್ಳುತ್ತಾ