ಬೆಂಗಳೂರು: ನಗರದ ಅಪಾರ್ಟ್ಮೆಂಟ್ ಗಳಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ಗಳಿಗೆ ಹೊಸ ರೂಲ್ಸ್ ಮಾಡಿದೆ ಪಾಲಿಕೆ. ಈಗಾಗಲೇ ನಗರದ ಅಪಾರ್ಟ್ಮೆಂಟ್ ಗಳಲ್ಲಿ ಕೊರೋನಾ ಸೋಂಕು ಸ್ಫೋಟಗೊಳ್ಳುತ್ತಿದ್ದು, ಮೂರನೇ ಅಲೆ ಆರಂಭವೇ ಎಂಬ ಅನುಮಾನ ಮೂಡತೊಡಗಿದೆ. ಸದ್ಯ ನಗರದ ಅಪಾರ್ಟ್ಮೆಂಟ್ ಗಳಲ್ಲೇ ಬಹುತೇಕ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಈಗಾಗಲೇ ನಗರದಲ್ಲಿ ಕೊರೋನಾ ಕಂಟ್ರೋಲ್ ಮಾಡುವುದಕ್ಕೆ ಹಲವು ಕ್ರಮಗಳನ್ನು ಪಾಲಿಕೆ ಪಾಲಿಸಲು ಮುಂದಾಗಿವೆಯಾದರೂ, ಅಪಾರ್ಟ್ಮೆಂಟ್ ಗಳಲ್ಲಿ ಕೊರೋನಾ ಹರಡುವಿಕೆಯನ್ನು ತಡೆಯುವ