ಚಿಕ್ಕಮಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭರ್ಜರಿ ಮಳೆಯಾಗುತ್ತಿರುವ ಹಿನ್ನಲೆ ಮಳೆಯಿಂದಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗಿದೆ. ಪರಿಣಾಮ ರಸ್ತೆ ತೆರವು ಕಾರ್ಯ ಹಿನ್ನೆಲೆ ಇಂದಿನಿಂದ ಚಂದ್ರದ್ರೋಣ ಪರ್ವತಕ್ಕೆ ಜು.28ರವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಹೌದು, ಈ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠ, ಹೊನ್ನಮ್ಮನಹಳ್ಳ, ಕೆಮ್ಮಣ್ಣುಗುಂಡಿ, ಸೀತಾಳಯ್ಯನಗಿರಿ ಪ್ರವೇಶಕ್ಕೆ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ