ಚಿಕ್ಕಬಳ್ಳಾಪುರ: ಕಲ್ಲು ಚಪ್ಪಡಿ ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಟ್ರಾಕ್ಟರ್ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಚೆಂಡೂರು ಬಳಿ ನಡೆದಿದೆ. ನಾರಾಯಣ ಸ್ವಾಮಿ (30) ಸ್ಥಳದಲ್ಲೇ ಸಾವನಪ್ಪಿದ ಟ್ಯಾಕ್ಟರ್ ಚಾಲಕ. ರಾಷ್ಟ್ರೀಯ ಹೆದ್ದಾರಿ-7ರ ಚೆಂಡೂರು ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ದಟ್ಟ ಮಂಜು ಆವರಿಸಿದ್ದ ಕಾರಣ ರಸ್ತೆ ಕಾಣದೆ ಈ ಅಪಘಾತ ಸಂಭವಿಸಿದೆ. ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆತನ್ನು