ಉದ್ಯಾನನಗರಿ, ಸಿಲಿಕಾನ್ ಸಿಟಿ ಎಂದೆಲ್ಲಾ ಹೆಸರು ಗಳಿಸಿರುವ ಬೆಂಗಳೂರಿನಲ್ಲಿ ಕೆಲಸ ಮಾಡುವ ಅನೇಕರಿಗೆ ಟ್ರಾಫಿಕ್ ಸಮಸ್ಯೆ ಹಾಗೂ ಪಾರ್ಕಿಂಗ್ ಸಮಸ್ಯೆ ನಿತ್ಯದ ಗೋಳು. ಮೆಟ್ರೋ ನಗರಿಯಲ್ಲಿ ದಿನೇ ದಿನೇ ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು, ವಾಹನಗಳ ಪಾರ್ಕಿಂಗ್ ಮಾಡುವುದೇ ದೊಡ್ಡ ಸಮಸ್ಯೆಯಾಗಿದೆ. ಅದರಲ್ಲೂ ಬೆಳಗ್ಗೆ ಎಲ್ಲರೂ ಕೆಲಸಕ್ಕೆ ತೆರಳುವ ಹಾಗೂ ಮರಳುವಂತಹ ಪ್ರಮುಖ ಸಮಯಗಳಲಂತೂ ಟ್ರಾಫಿಕ್ ವಿಪರೀತವಾಗಿರುತ್ತದೆ. ರಸ್ತೆಯ ಪ್ರತಿ ಇಂಚಿನಲ್ಲೂ ಕಾರುಗಳ ಚಕ್ರಗಳು ಕಾಣಿಸುತ್ತಿರುತ್ತವೆ. ಹೀಗಾಗಿ ವಾಹನಗಳ ಸಂಖ್ಯೆ ಭಾರಿ