ಆಟೊ, ಕ್ಯಾಬ್ಗಳ ಚಾಲಕರು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ವತಿಯಿಂದಲೇ ಹೊಸ ಆ್ಯಪ್ ರೂಪಿಸಲು ಸಿದ್ಧತೆ ನಡೆದಿದೆ. ಈ ಬಗ್ಗೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಲಾಭ ಮತ್ತು ನಷ್ಟ ಇಲ್ಲದ ಪರಿಕಲ್ಪನೆಯಲ್ಲಿ ಈ ಆ್ಯಪ್ ಅನ್ನು ಪರಿಚಯಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಕೆಲವೇ ತಿಂಗಳಲ್ಲಿ ಹೊಸ ಆ್ಯಪ್ನ ಪ್ರಾಥಮಿಕ ಪ್ರಯೋಗಕ್ಕೆ ಚಾಲನೆ ದೊರೆಯಲಿದೆ. ನಂತರ ಇತರ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದರು. ಹೊಸ ಆ್ಯಪ್ನಲ್ಲಿ ದರ