ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದನ್ನೂ ಸಾರಿಗೆ ನೌಕರರು ಅರಿತುಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಾರಿಗೆ ನೌಕರರ ವೇತನವನ್ನು 10 ಪ್ರತಿಶತ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ನೀಡಿದ್ದಾರೆ. ಸಾರಿಗೆ ನೌಕರರು ಇದನ್ನು ತೃಪ್ತಿಯಿಂದ ಸ್ವೀಕರಿಸಬೇಕು ಎಂದು ತಿಳಿಸಿದರು. ತಮ್ಮ ಬೇಡಿಕೆಯನ್ನು ಸರಕಾರದ ಮುಂದಿಡಲು ಎಲ್ಲರಿಗೂ ಹಕ್ಕು