ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಶೇಖಡಾ 10ಕ್ಕಿಂತ ಹೆಚ್ಚು ವೇತನ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ವೇತನವನ್ನು ಕ್ಯಾಬಿನೆಟ್ನಲ್ಲಿ 8 ಪ್ರತಿಶತ ಹೆಚ್ಚಿಸಲು ನಿರ್ಧರಿಸಲಾಗಿತ್ತು. ಆದರೆ, ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ 10 ಪ್ರತಿಶತ ವೇತನ ಹೆಚ್ಚಿಸಲು ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು. ಮೊದಲೇ ಸಾರಿಗೆ ಇಲಾಖೆ