ಬೆಂಗಳೂರು : ಇಂದಿನಿಂದ ಜಾರಿಗೆ ಬರುವಂತೆ ಬಿಎಂಆರ್ಸಿಎಲ್ ತನ್ನ ಮೆಟ್ರೋ ಸಂಚಾರದ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದೆ. ಅಲ್ಲದೇ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡುವ ವೇಳೆ ಕೋವಿಡ್ 19 ನಿಬಂಧನೆಗಳನ್ನು ಪಾಲಿಸುವಂತೆಯೂ ಒತ್ತಾಯಿಸಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಮೆಟ್ರೋ ರೈಲುಗಳು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಂಚರಿಸಲಿದೆ ಎಂದು ಬಿಎಂಆರ್ಸಿಎಲ್ ಅಧಿಕೃತ ಮಾಹಿತಿ ನೀಡಿದೆ. ಇದರ ಪ್ರಕಾರ ದಿನದ ಕೊನೆಯ ಮೆಟ್ರೋ ರೈಲುಗಳು ರಾತ್ರಿ 9:30ಕ್ಕೆ ಬೈಯಪ್ಪನಹಳ್ಳಿ, ಕೆಂಗೇರಿ,