ಬೆಳಗಾವಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕಿತ್ತೂರಿನಲ್ಲಿ ಜಿಲ್ಲಾಡಳಿತ ಬೆಳಗಾವಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ ರಾಣಿ ಚೆನ್ನಮ್ಮನ ಕಿತ್ತೂರು ಉತ್ಸವ-2018ರ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಗುರುವಾರ ಕಲಬುರಗಿಯ ಜಿ.ಚಂದ್ರಕಾಂತ ಅವರ ತ್ರಿಭಾಷಾ ವಚನ ಗಾಯನ ಸಭಿಕರೆಲ್ಲರ ಹೃನ್ಮನ ಗೆದ್ದಿತು.