ಬರ್ತ್ ಡೇ ಪಾರ್ಟಿಗೆ ಕರೆದು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕರು

ಬೆಂಗಳೂರು, ಬುಧವಾರ, 1 ಮೇ 2019 (06:34 IST)

ಬೆಂಗಳೂರು : ಮಹಿಳೆಯೊಬ್ಬಳನ್ನು ಬರ್ತ್ ಡೇ ಪಾರ್ಟಿ ನೆಪದಲ್ಲಿ ಕರೆದು ಮದ್ಯಪಾನ ಮಾಡಿಸಿ ಹಣದ  ಆಮಿಷಯೊಡ್ಡಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ  ಬೆಂಗಳೂರಿನಲ್ಲಿ ನಡೆದಿದೆ.ವೇಲು ಹಾಗೂ ಆತನ ಸ್ನೇಹಿತರು ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳು. ವೇಲು ತನ್ನ ಗೆಳೆಯನ ಹುಟ್ಟುಹಬ್ಬದ ಪಾರ್ಟಿ ಇದೆ ಎಂದು ರಾತ್ರಿ ವೇಳೆ ಜೀವನ್ ಭೀಮಾನಗರದ ಕ್ಲೌಡ್ ನೈನ್ ಪಬ್ ನಲ್ಲಿ ಆಯೋಜಿಸಿದ್ದ ಬರ್ತ್ ಡೇ ಪಾರ್ಟಿಗೆ ಮಹಿಳೆಯನ್ನು ಕರೆದುಕೊಂಡು ಹೋಗಿದ್ದನು. ಅಲ್ಲಿ ಆಕೆಗೆ ಮದ್ಯಪಾನ ಮಾಡಿಸಿ ಡ್ರಾಪ್ ಕೊಡುವುದಾಗಿ ಹೇಳಿ  ಸ್ನೇಹಿತರ ಜೊತೆ ಸೇರಿ ಕೇಳಿದಷ್ಟು ದುಡ್ಡು ಕೊಡ್ತಿವಿ ಸಹಕರಿಸು ಎಂದು ಹೇಳಿ ಕಾರಿನಲ್ಲಿಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

 

ಇದಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಆಕೆಯ ಮೇಲೆ ಹಲ್ಲೆ ಮಾಡಿದ್ದಲ್ಲದೇ ಮೈ-ಕೈ ಮುಟ್ಟಿ ನೀಡಿದ್ದಾರೆ. ಕಾಮುಕರಿಂದ ಹೇಗೋ ತಪ್ಪಿಸಿಕೊಂಡ ಮಹಿಳೆ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಬಗ್ಗೆ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 34, 504, 354 ಅಡಿ ಪ್ರಕರಣ ದಾಖಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

                                                `

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

SSLC ಫಲಿತಾಂಶ; ಯಾವ ಜಿಲ್ಲೆಗೆ ಯಾವ ಸ್ಥಾನ?

ರಾಜ್ಯದಲ್ಲಿ ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 73.70 ರಷ್ಟು ...

news

ಸರಕಾರಕ್ಕೆ ವೀರಶೈವ ಲಿಂಗಾಯತ ಸಂಘಟನೆ ಎಚ್ಚರಿಕೆ

ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಲಾಗಿದೆ.

news

ಸಿಐಡಿ ಕಚೇರಿಗೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಹೇಳಿದ್ದೇನು?

ಸಿಐಡಿ ಕಚೇರಿಗೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದು, ಬಂಧಿತ ಪತ್ರಕರ್ತ ಹೇಮಂತ್ ಕುಮಾರ್ ಹಾಗೂ ಸಿಐಡಿ ...

news

ಕೋರ್ಟ್ ಆವರಣದಲ್ಲೇ ಭ್ರಷ್ಟಾಚಾರ ಬಯಲಿಗೆ ಎಳೆದ ಎಸಿಬಿ

ನ್ಯಾಯಾಲಯ ಆವರಣದಲ್ಲಿಯೇ ಭ್ರಷ್ಟಾಚಾರವನ್ನು ಬಯಲಿಗೆ ಎಳೆದಿದೆ ಎಸಿಬಿ.