ಬೆಂಗಳೂರು : ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಅವರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಡಾ.ಅಜಯ್ ಸಿಂಗ್ ‘ನನಗೆ ಅಸಮಾಧಾನ ಇರೋದು ನಿಜ. ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ’ ಎಂದು ಖಡಕ್ ಆಗಿ ಹೇಳಿದ್ದಾರೆ.