ಚಾಮರಾಜನಗರಕ್ಕೆ ದಕ್ಷಿಣ ವಲಯ DIG ಬೋರಲಿಂಗಯ್ಯ ಭೇಟಿ ನೀಡಿ ಪೊಲೀಸರೊಂದಿಗೆ ಸಭೆ ನಡೆಸಿದ್ದಾರೆ.. ಯಾವುದೇ ಪ್ರಕರಣಗಳನ್ನು ನಿರ್ಲಕ್ಷಿಸದಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಇನ್ನು ಟಿ.ನರಸೀಪುರ ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಕೊಲೆ ಪ್ರಕರಣ ವಿಚಾರವಾಗಿ DIG ಬೋರಲಿಂಗಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನಮ್ಮ ಹಿರಿಯ ಅಧಿಕಾರಿಗಳು ಈಗಾಗಲೇ ಮಾತಾಡಿದ್ದಾರೆ. ಘಟನೆ ತಡೆಯೋ ವಿಚಾರವಾಗಿ ಪೊಲೀಸರಿಂದ ಸಣ್ಣಪುಟ್ಟ ತಪ್ಪಾಗಿದ್ದು, ಅವಘಡ ತಡೆಯುವಲ್ಲಿ ವಿಫಲರಾಗಿದ್ದೇವೆ ಎಂದಿದ್ದಾರೆ. ಘಟನೆ ಬಳಿಕ ಆರೋಪಿಗಳ ಬಂಧಿಸಲಾಗಿದೆ. ಪ್ರಕರಣವನ್ನ