ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾದ ದೂರಿನ ತನಿಖೆ ನಡೆಸುತ್ತಿರುವ ಎಸಿಬಿಯಿಂದ ಸತ್ಯ ಸಂಗತಿ ಹೊರಬೀಳಲಿದೆ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಆದರೆ, ಸರಕಾರ ಯಾವುದೇ ಕಾರಣಕ್ಕೂ ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳ ತನಿಖಾ ಸಂಸ್ಥೆಯಾಗಿದ್ದು, ದುರ್ಬಳಕೆ ಮಾಡಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಯಡಿಯೂರಪ್ಪ ವಿರುದ್ಧ ಸರಕಾರ