ಬೆಂಗಳೂರು : ದೇಶದ ಪ್ರಧಾನಿಯವರು ಟಿಬಿ ಮುಕ್ತ ಭಾರತಕ್ಕಾಗಿ ಪಣ ತೊಟ್ಟಿದ್ದಾರೆ. ತಮ್ಮ ಕನಸಿನ ಸಾಕಾರಕ್ಕಾಗಿ ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ ನೀಡಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಕ್ಷಯ ರೋಗಿಗಳ ದತ್ತು ಪಡೆಯುವ ಮತ್ತು ನಿ-ಕ್ಷಯ ಮಿತ್ರ ದಾನಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಟಿಬಿ ಮುಕ್ತ ಭಾರತ ಅಭಿಯಾನವನ್ನು ಜನಾಂದೋಲನವನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.ನಾಗರಿಕರು, ಎನ್ಜಿಒಗಳು, ಕಾರ್ಪೋರೇಟ್ ಸಂಸ್ಥೆಗಳು, ಚುನಾಯಿತ ಪ್ರತಿನಿಧಿಗಳು ನಿ-ಕ್ಷಯ ಮಿತ್ರರಾಗುವ ಮೂಲಕ