ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರು ಮುಖ್ಯಮಂತ್ರಿಯನ್ನ ಬಳಸಿಕೊಂಡು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಜಿ. ಎಸ್. ಬಸವರಾಜು ತುಮಕೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಹರಿಯುತ್ತಿರುವ ಹೇಮಾವತಿ ನೀರನ್ನ ರಾಮನಗರ, ಚೆನ್ನಪಟ್ಟಣಕ್ಕೆ ತೆಗೆದುಕೊಂಡು ಹೋಗುವ ಹುನ್ನಾರ ಮಾಡುತ್ತಿದ್ದಾರೆ. ಈ ಮೂಲಕ ತುಮಕೂರು ಜಿಲ್ಲೆಯ ಜನರಿಗೆ ಅನ್ಯಾಯ ಮಾಡಲು ಮುಂದಾಗಿದ್ದಾರೆ. ಜನರ ನಡುವೆ ಶಾಂತಿ ಕದಡುವ ಪ್ರಯತ್ನ ಅಣ್ಣ -ತಮ್ಮ ಮಾಡುತ್ತಿದ್ದಾರೆ ಇದನ್ನ ಖಂಡಿಸುತ್ತೇನೆ ಎಂದಿದ್ದಾರೆ. ಗುಬ್ಬಿ ತಾಲ್ಲೂಕಿನಿಂದ