ತುಳು ಹಾಗೂ ಕನ್ನಡ ಹಿರಿಯ ಚಿತ್ರನಟ ಉಡುಪಿ ಮೂಲದ ಸದಾಶಿವ ಸಾಲ್ಯಾನ್(68) ರವಿವಾರ ಮುಂಬೈಯಲ್ಲಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮುಂಬೈಯ ನಾಟಕ ರಂಗದಲ್ಲಿ ಬೆಳೆದು ನಂತರ ಕನ್ನಡ, ತುಳು ಚಿತ್ರರಂಗದಲ್ಲಿ ಮಿಂಚಿದ ಸುಮಾರು 50 ಚಿತ್ರಗಳಲ್ಲಿ ನಟಿಸಿದ ಏಕೈಕ ಮುಂಬೈ ರಂಗ ಕಲಾವಿದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಸಾಲ್ಯಾನ್ ಅವರು ಭಾಗ್ಯವಂತೆದಿ, ಬದ್ಕೆರೆಬುಡ್ಲೆ, ಪೆಟ್ಟಾಯಿ ಪಿಲಿ, ಸತ್ಯ ಓಲುಂಡು, ದಾರೆದ ಸೀರೆ, ಸಮರ ಸಿಂಹ, ಅನಾಥ ರಕ್ಷಕ, ಸಿಡಿದೆದ್ದ ಪಾಂಡವರು, ಕಾಲೆೇಜು ರಂಗ, ಉತ್ತರ