ಮೈಸೂರು : `ವಿಧಾನ ಸೌಧದ ವೆಸ್ಟ್ ಗೇಟ್ ಬಳಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಟ್ವೀಟರ್ ನಲ್ಲಿ ಬಿಜೆಪಿ ನಾಯಕ ಡಿವಿ ಸದಾನಂದಗೌಡರು ಕಾಂಗ್ರೆಸ್ ನ ಸಿದ್ದರಾಮಯ್ಯನವರ ಕಾಲೆಳೆದಿದ್ದಾರೆ. ವಿಧಾನಸೌಧ ಕಚೇರಿಯಲ್ಲಿ ಗುತ್ತಿಗೆ ನೌಕರನ ಬಳಿ ಸಿಕ್ಕಿರುವ ಪ್ರಕರಣ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ತನ್ನ ಸಿಬ್ಬಂದಿ ಬಳಿ ಸಿಕ್ಕಿದೆ ಎನ್ನಲಾದ ಹಣದ ಬಗ್ಗೆ ತನಿಖೆ ನಡೆಯಲಿ, ನಾನು ಸಿದ್ದ ಎಂದು ಸಚಿವ ಪುಟ್ಟರಂಗಶೆಟ್ಟಿ ಅವರು ಹೇಳಿದ್ದಾರೆ.