ನಗರದ ಎಂ.ಜಿ ರಸ್ತೆಯಲ್ಲಿನ ಪಬ್ವೊಂದರಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಆರೋಪಿಗಳನ್ನು ಬಿಟ್ಟು ಬಿಡುವಂತೆ ಸಂತ್ರಸ್ತೆಯೇ ಪೊಲೀಸರನ್ನು ಒತ್ತಾಯಿಸುತ್ತಿದ್ದಾಳೆ. ಜನವರಿ 13 ರಂದು ಕಂಠಪೂರ್ತಿ ಕುಡಿದಿದ್ದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಕರೆದೊಯ್ದಿದ್ದ ಇಬ್ಬರು ಯುವಕರು ಕಾರಿನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕಮ್ಮನಹಳ್ಳಿ ಬಳಿ ಆಕೆಯನ್ನು ಬಿಟ್ಟು ಪರಾರಿಯಾಗಿದ್ದರು. ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಯುವತಿಯೇ ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ