ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಟ್ವಿಸ್ಟ್ ದೊರಕಿದ್ದು, ಆರೋಪಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಅಪರಿಚಿತ ಬಾಲಕಿ ಅಪಹರಿಸಿ ಅತ್ಯಾಚಾರ ಮಾಡಲಾಗಿದೆ ಎಂದು ದೂರು ನೀಡಿದ್ದರು ಬಾಲಕಿ ಪೋಷಕರು. ಈ ಕುರಿತು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ನಾನು ತಪ್ಪು ಮಾಡಿಲ್ಲಾ ಎಂದು ವೀಡಿಯೋ ಮಾಡಿ ಆರೋಪಿ ಸಂದೀಪ್ ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ. ಮನೆ ಸಮೀಪವೇ ಅವಳೇ ನನ್ನನ್ನ ಕರೆದಿದ್ದಳು. ಹೀಗಾಗಿ ನಾನು ಹೋದೆ.